ಬೆಂಗಳೂರಿನ ಪ್ರತಿಷ್ಠಿತ ಸಾರಿಗೆ ಸಂಸ್ಥೆಯಾಗಿರುವ ಮೆಟ್ರೋದಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ! ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
BMRCL Recruitment 2026
ಈ ಒಂದು ನೇಮಕಾತಿ ಅಡಿಯಲ್ಲಿ ಒಟ್ಟು 50 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಭಾರತೀಯ ಸೇನೆ, ನೌಕಾಪಡೆ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ವಾಯುಪಡೆ ಸೇರಿದಂತೆ ಇನ್ನಿತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಹಾಗೂ ನಿವೃತ್ತರಾದ ಸಿಬ್ಬಂದಿಗಳು ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಟ 62 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ 8, 2026 ರಿಂದ ಅಕ್ಟೋಬರ್ 31,2026 ರ ವರೆಗೆ ಕಾಲಾವಕಾಶ ನೀಡಲಾಗಿದ್ದು, ಆಸಕ್ತ ಅಭ್ಯರ್ಥಿಗಳು BMRCL ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ, 5-11-2026 ರೊಳಗೆ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಂಬಂಧಿತ ವಿಳಾಸಕ್ಕೆ ಸಲ್ಲಿಸಿ.
ಹುದ್ದೆಯ ಕಿರು ವಿಮರ್ಶೆ:
| ನೇಮಕಾತಿ ಸಂಸ್ಥೆ | ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ |
| ಹುದ್ದೆಯ ಹೆಸರು | ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ |
| ಹುದ್ದೆಯ ಸಂಖ್ಯೆ | 50 ಹುದ್ದೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31-10-2026 |
| ಉದ್ಯೋಗ ಸ್ಥಳ | ಬೆಂಗಳೂರು – ಕರ್ನಾಟಕ |
ಹುದ್ದೆಯ ವಿವರ:
ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ ಈ ಕೆಳಕಂಡಂತಿದೆ.
| ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
| ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ | 50 ಹುದ್ದೆಗಳು |
ಹುದ್ದೆಗೆ ಸಂಬಂಧಿಸಿದ ಅರ್ಹತೆ:
- ಭಾರತೀಯ ಸೇನೆ, ನೌಕಾಪಡೆ, ವಾಯುಪಡೆ, CAPF, CRPF, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, BSF, CSIF ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತ ನೌಕರರು ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
- ರಕ್ಷಣಾ ಸೇವೆಯಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ ಗಳಾಗಿ ಸೇವೆ ಸಲ್ಲಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ರಾಜ್ಯ ಪೊಲೀಸ್ ಇಲಾಖೆಯಲ್ಲಿ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಗಳಾಗಿ ಸೇವೆ ಸಲ್ಲಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನ ಇರಬೇಕು.
ವಯೋಮಿತಿ ವಿವರ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 62 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ.
ಅರ್ಜಿ ಶುಲ್ಕ:
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಯಾವುದೇ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಎಲ್ಲ ಅಭ್ಯರ್ಥಿಗಳು ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ, ನಿಗದಿತ ದಿನಾಂಕದೊಳಗೆ ಸಂಬಂಧಿತ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಿ.
ವೇತನ ಶ್ರೇಣಿ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ 60 ವರ್ಷದೊಳಗಿನ ಅಭ್ಯರ್ಥಿಗಳಿಗೆ ಮಾಸಿಕ ರೂ. 32,650/- ಹಾಗೂ 60 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳಿಗೆ ರೂ. 30.000/- ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:
- ಪಾಸ್ ಪೋರ್ಸ್ ಸೈಜ್ ಫೋಟೋ
- ವಯಸ್ಸಿನ ಪುರಾವೆ
- ಶೈಕ್ಷಣಿಕ ಪ್ರಮಾಣಪತ್ರ
- ಅನುಭವ ಪ್ರಮಾಣಪತ್ರ
- ಅಭ್ಯರ್ಥಿಗಳ ಸಹಿ
- ಹಾಗೂ ಇತರೆ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬೆಂಗಳೂರು ಮೆಟೋ ರೈಲು ಕಾರ್ಪೋರೇಶನ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಕಾಣುವ ಕೆರಿಯರ್ ವಿಭಾಗಕ್ಕೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತಾ ಮಾನದಂಡವನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತ ಪಡಿಸಿಕೊಳ್ಳಿ.
- ನಂತರ, ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
- ಅರ್ಜಿ ಸಲ್ಲಿಸಿದ ನಂತರ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಂಡು, ನಂತರ ಇದರೊಂದಿಗೆ ವಯಸ್ಸಿನ ಪುರಾವೆ, ಅನುಭವ ಪ್ರಮಾಣಪತ್ರ, ಶೈಕ್ಷಣಿಕ ದಾಖಲೆ ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕರಿಸಿ, ಒಂದು ಲಕೋಟೆಗೆ ಹಾಕಿ ನೋಂದಾಯಿತ ಅಂಚೆ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಿ.
ಅರ್ಜಿ ಸಲ್ಲಿಸುವ ವಿಳಾಸ:
ಜನರಲ್ ಮ್ಯಾನೇಜರ್ (ಹೆಚ್. ಆರ್),
ಬೆಂಗಳೂರು ಮೆಟೋ ರೈಲ್ ಕಾರ್ಪೋರೇಶನ್ ಲಿಮಿಟೆಡ್,
III ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಹೆಚ್ ರಸ್ತೆ, ಶಾಂತಿನಗರ,
ಬೆಂಗಳೂರು – 560027
ಆಯ್ಕೆ ಪ್ರಕ್ರಿಯೆ:
- ದೈಹಿಕ ಸಾಮರ್ಥ್ಯ ಪರೀಕ್ಷೆ:
ಅಭ್ಯರ್ಥಿಗಳ ವಯಸ್ಸಿನ ಗುಂಪಿಗೆ ಅನುಗುಣವಾಗಿ 1.5 ಕಿ. ಮೀ ಓಟವನ್ನು 10 ನಿಮಿಷ ಅಥವಾ 11.30 ನಿಮಿಷದೊಳಗೆ ಪೂರ್ಣಗೊಳಿಸಬೇಕು.
- ಲಿಖಿತ ಪರೀಕ್ಷೆ
- ಸಂದರ್ಶನ
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 08-10-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31-10-2026 |
| ಭರ್ತಿ ಮಾಡಿರುವ ಅರ್ಜಿಯ ಹಾರ್ಡ್ ಕಾಪಿ ತಲುಪಿಸಲು ಕೊನೆಯ ದಿನಾಂಕ | 05-11-2026 |
ಪ್ರಮುಖ ಲಿಂಕುಗಳು:
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ಮಾತು:
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಸೇನೆ ಅಥವಾ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಅನುಭವವಿದ್ದು, 62 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಗೆ ಬೆಂಗಳೂರು ಉದ್ಯೋಗ ಪಡೆಯಲು ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ, ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 31 ಅಕ್ಟೋಬರ್ 2026 ರೊಳಗೆ ಅರ್ಜಿ ಸಲ್ಲಿಸಿ.



