ಮಂಗಳೂರಿನಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗಾವಕಾಶ! ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಅಂಡರ್ ಗ್ರೌಂಡ್ ಡ್ರೈನೇಜ್ ಸಹಾಯಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಹೊರಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
MCC Recruitment 2026
ಮಂಗಳೂರಿನ ನಗರಾಭಿವೃದ್ದಿ ಮತ್ತು ಸ್ವಚ್ಛತಾ ಕಾರ್ಯಕ್ರಮವನ್ನು ಬಲಪಡಿಸುವ ಉದ್ದೇಶದಿಂದ ಈ ಒಂದು ನೇಮಕಾತಿಗೆ ಅವಕಾಶ ಕಲ್ಪಿಸಿದ್ದು, ಜುಲೈ 24, 2026 ಕ್ಕಿಂತ ಮುಂಚಿತವಾಗಿ ಮಂಗಳೂರಿನ ಮಹಾನಗರ ಪಾಲಿಕೆಯಲ್ಲಿ ಯುಜಿಡಿ ಹೆಲ್ಪರ್ ವಿಭಾಗದಲ್ಲಿ ಹೊರಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಮಂಗಳೂರಿನ ಸ್ಥಳೀಯ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 28, 2026 ವರೆಗೂ ಕಾಲಾವಕಾಶ ಕಲ್ಪಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮಂಗಳೂರಿನ ಮಹಾನಗರ ಪಾಲಿಕೆಯ ಆಡಳಿತ ಕಚೇರಿಗೆ ಸಲ್ಲಿಸಿ.
ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ | ಮಂಗಳೂರು ಮಹಾನಗರ ಪಾಲಿಕೆ |
| ಹುದ್ದೆಯ ಹೆಸರು | ಯುಜಿಡಿ ಹೆಲ್ಪರ್ ಹುದ್ದೆಗಳು |
| ಹುದ್ದೆಯ ಸಂಖ್ಯೆ | ಒಟ್ಟು 45 ಹುದ್ದೆಗಳು |
| ಉದ್ಯೋಗ ಸ್ಥಳ | ಮಂಗಳೂರು – ಕರ್ನಾಟಕ |
| ಅರ್ಜಿ ಸಲ್ಲಿಸುವ ವಿಧಾನ | ಆಫ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 28-10-2026 |
ಹುದ್ದೆಯ ಸಂಕ್ಷಿಪ್ತ ವಿವರ:
ಮಂಗಳೂರು ಮಹಾನಗರ ಪಾಲಿಕೆ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಪಾಲಿಕೆಯಲ್ಲಿ ಖಾಲಿ ಇರುವ 45 ಯುಜಿಡಿ ಹೆಲ್ಪರ್ ಹುದ್ದೆಗಳನ್ನು ವರ್ಗವಾರು ಹಂಚಿಕೆ ಮಾಡಲಾಗಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
| ವಿವಿಧ ವರ್ಗಗಳು | ಹುದ್ದೆಗಳ ಸಂಖ್ಯೆ |
|---|---|
| ಪರಿಶಿಷ್ಟ ಜಾತಿ | 07 ಹುದ್ದೆಗಳು |
| ಪರಿಶಿಷ್ಟ ಪಂಗಡ | 02 ಹುದ್ದೆಗಳು |
| ಪ್ರವರ್ಗ -I | 02 ಹುದ್ದೆಗಳು |
| ಪ್ರವರ್ಗ -2A | 07 ಹುದ್ದೆಗಳು |
| ಪ್ರವರ್ಗ -2B | 02 ಹುದ್ದೆಗಳು |
| ಪ್ರವರ್ಗ -3A | 01 ಹುದ್ದೆ |
| ಪ್ರವರ್ಗ -3B | 02 ಹುದ್ದೆಗಳು |
| ಸಾಮಾನ್ಯ ವರ್ಗ | 22 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
ಯುಜಿಡಿ ಹೆಲ್ಪರ್ ಹುದ್ದೆಗಳು:
- ಯುಜಿಡಿ ಹೆಲ್ಪರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ನಿರ್ದಿಷ್ಟ ಶೈಕ್ಷಣಿಕ ಅರ್ಹತೆ ಹೊಂದಿರುವ ಅಗತ್ಯ ಇಲ್ಲ
- ಅಭ್ಯರ್ಥಿಗಳಿಗೆ ಕನ್ನಡವನ್ನು ಮಾತನಾಡಲು ಗೊತ್ತಿರಬೇಕು.
- ಮಹಾನಗರ ಪಾಲಿಕೆಯಲ್ಲಿ ಯುಜಿಡಿ ಹೆಲ್ಪರ್ ವಿಭಾಗದಲ್ಲಿ ಹೊರಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ವಯೋಮಿತಿ ವಿವರ:
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಯುಜಿಡಿ ಹೆಲ್ಪರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು ದಿನಾಂಕ 24-07-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ ಇದರನ್ವಯ ಅಭ್ಯರ್ಥಿಗಳು ಗರಿಷ್ಟ 55 ವರ್ಷ ವಯೋಮಿತಿಯನ್ನು ಮೀರಿರಬಾರದು.
ಅರ್ಜಿ ಶುಲ್ಕ:
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ. 100/-
- ಇತೆರೆ ಎಲ್ಲ ವರ್ಗಗಳ ಅಭ್ಯರ್ಥಿಗಳಿಗೆ ರೂ. 200/-
ಅಭ್ಯರ್ಥಿಗಳು ಪಾಲಿಕೆಯ ಆಡಳಿತ ಶಾಖೆಯಲ್ಲಿ ಚಲನ್ ಪಡೆದು ಪಾಲಿಕೆಯ ಬ್ಯಾಂಕ್ ಖಾತೆಗೆ ಅರ್ಜಿ ಶುಲ್ಕವನ್ನು ಜಮಾ ಮಾಡಬೇಕು.
ವೇತನ ಶ್ರೇಣಿ:
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಯುಜಿಡಿ ಹೆಲ್ಪರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000/- ದಿಂದ ರೂ. 46,675/- ವರೆಗೆ ವೇತನವನ್ನು ನೀಡಲಾಗುತ್ತದೆ.
ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ವಯಸ್ಸಿನ ದೃಢೀಕರಣ ಪತ್ರ
- ಗ್ರಾಮೀಣ ಅಭ್ಯರ್ಥಿ ಪ್ರಮಾಣಪತ್ರ
- ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣಪತ್ರ
- ಪಾಸ್ ಪೋರ್ಟ್ ಸೈಜ್ ಫೋಟೋ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ವಾಸಸ್ಥಳ ಪ್ರಮಾಣ ಪತ್ರ
- ಸ್ಥಳೀಯ ಸಂಸ್ಥೆಯ ಅನುಭವ ಪ್ರಮಾಣಪತ್ರ
- ಇತರೆ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಂಗಳೂರು ಮಹಾನಗರ ಪಾಲಿಕೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಯುಜಿಡಿ ಹೆಲ್ಪರ್ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
- ನಂತರ ಮಂಗಳೂರು ಮಹಾನಗರ ಪಾಲಿಕೆಗೆ ಆಡಳಿತ ಶಾಖೆಗೆ ಭೇಟಿ ನೀಡಿ ಯುಜಿಡಿ ಹೆಲ್ಪರ್ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಕೇಳಿ ಪಡೆದುಕೊಳ್ಳಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ವೈಯಕ್ತಿಕ ವಿವರ, ವಿಳಾಸ, ಅನುಭವ ವಿವರ, ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ ನಿಗದಿಪಡಿಸಿದ ಜಾಗಕ್ಕೆ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋವನ್ನು ಅಂಟಿಸಿ ಹಾಗೂ ನಿಮ್ಮ ಸಹಿಯನ್ನು ಹಾಕಿ.
- ವಯಸ್ಸಿನ ಪುರಾವೆ, ಅನುಭವ ಪ್ರಮಾಣಪತ್ರ, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ ಹಾಗೂ ಈ ಮೇಲೆ ನೀಡಲಾದ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ ಅರ್ಜಿಯನ್ನು ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಯುಜಿಡಿ ಹೆಲ್ಪರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಅವರು ಆಫ್ಲೈನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ಪರಿಶೀಲನೆ ನಡೆಸಿ ಶಾರ್ಟ್ ಲಿಸ್ಟ್ ಅನ್ನು ಸಿದ್ದಪಡಿಸಿ, ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆಗೆ ಕರೆಯಲಾಗುತ್ತದೆ.
apply now
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 12-10-2026 |
| ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 28-10-2026 |



