WCD Anganwadi Recruitment 2026: Worker & Helper Posts! SSLC/PUC Pass Eligible – Apply by October 23

WCD: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ! SSLC, PUC ಪಾಸ್ ಸಾಕು । ಅಕ್ಟೋಬರ್ 23 ಕೊನೆಯ ದಿನ

ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯದ ನಿರುದ್ಯೋಗ ಮಹಿಳೆಯರಿಗೆ ಭರ್ಜರಿ ಉದ್ಯೋಗಾವಕಾಶವನ್ನು ಕಲ್ಪಿಸಿದೆ. ಹೌದು, ಪ್ರಸ್ತುತ ಸಾಲಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ಭರ್ತಿಗೆ ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

WCD Recruitment 2026

ರಾಜ್ಯದ ವಿವಿಧ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 136 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಲ್ಲಿ 68 ಹುದ್ದೆಗಳನ್ನು ಅಂಗನವಾಡಿ ಕಾರ್ಯಕರ್ತೆ ಹಾಗೂ 68 ಹುದ್ದೆಗಳನ್ನು ಅಂಗನವಾಡಿ ಸಹಾಯಕಿ ಹುದ್ದೆಗಳಾಗಿ ಹಂಚಿಕೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಗ್ರಾಮೀಣ ಭಾಗದಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 23, 2026 ರ ವರೆಗೂ ಕಾಲಾವಕಾಶ ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆ ಹೆಸರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ
ಹುದ್ದೆಯ ಹೆಸರು ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ
ಹುದ್ದೆಗಳ ಸಂಖ್ಯೆ ಒಟ್ಟು 136 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23-10-2026

ಹುದ್ದೆಯ ಸಂಪೂರ್ಣ ಮಾಹಿತಿ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರಸ್ತುತ ಸಾಲಿನಲ್ಲಿ ಖಾಲಿ ಇರುವ 136 ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅಕ್ಟೋಬರ್ 23 2026 ವರೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ SSLC ಹಾಗೂ PUC ಅಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕನಿಷ್ಠ19 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಅತ್ಯಾಕರ್ಷಕ ಗೌರವಧನವನ್ನು ಸಹ ನೀಡಲಾಗುತ್ತದೆ.

ಹುದ್ದೆಯ ವಿವರ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಇಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆ 68 ಹುದ್ದೆಗಳು
ಅಂಗನವಾಡಿ ಸಹಾಯಕಿ 68 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

  • ಅಂಗನವಾಡಿ ಕಾರ್ಯಕರ್ತೆ:

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ PUC ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

  • ಅಂಗನವಾಡಿ ಸಹಾಯಕಿ:

ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಅಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.

ವಯೋಮಿತಿ ವಿವರ:

ರಾಜ್ಯದ ವಿವಿಧ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಹಾಗೂ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಕಲಚೇತನ ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆಯನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಯಮಾವಳಿಗಳ ಪ್ರಕಾರ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಯಾವುದೇ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಎಲ್ಲ ವರ್ಗಗಳ ಮಹಿಳೆಯರು ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಯಮಾವಳಿಗಳ ಪ್ರಕಾರ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಆಯ್ಕೆದ ಅಭ್ಯರ್ಥಿಗಳಿಗೆ ಈ ಕೆಳಗೆ ತಿಳಿಸಿರುವಂತೆ ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 5,500/- ಗೌರವಧನವನ್ನು ನೀಡಲಾಗುತ್ತದೆ.
  • ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಆಯ್ಕೆಯ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 3,000/- ಗೌರವಧನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು ಮೊದಲು ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ.
  • ನಂತರ ಮುಖಪುಟದಲ್ಲಿ ಕಾಣುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ವಿಳಾಸ ಸೇರಿದಂತೆ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಿಮ್ಮ ಜಿಲ್ಲೆ, ಯೋಜನೆ, ಅಧಿಸೂಚನೆ ಸಂಖ್ಯೆ, ಹಾಗೂ ನಿಮ್ಮ ಆಯ್ಕೆಯ ಹುದ್ದೆಯನ್ನು ಆರಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ.
  • ನಂತರ ನಿಮ್ಮ ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ ಹಾಗೂ ಸಹಿಯನ್ನು ಅಪ್ಲೋಡ್ ಮಾಡಿ.
  • ಶೈಕಣಿಕ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿ, ವಯಸ್ಸಿನ ಪುರಾವೆ ಸೇರಿದಂತೆ ಇನ್ನಿತರ ಎಲ್ಲ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ಪರಿಶೀಲನೆ ನಡೆಸಿ, ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
  • ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕಡ್ಡಾಯವಾಗಿ ಆಯಾ ಅಂಗನವಾಡಿ ಕೇಂದ್ರಗಳಲ್ಲಿನ ಗ್ರಾಮ ಅಥವಾ ವಾರ್ಡ್ ಗಳ ಕಾಯಂ ನಿವಾಸಿ ಆಗಿರಬೇಕು. ಅನೇಕ ಅಭ್ಯರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದರೆ, ಸ್ಥಳೀಯ ನಿವಾಸಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
  • ವಿಧವೆಯರಿಗೆ, ಅಂಗವಿಕಲರಿಗೆ, ದೇವದಾಸಿಗಳಿಗೆ ನಿಯಮಾನುಸಾರ ಮೊದಲ ಆದ್ಯತೆ ನೀಡಲಾಗುತ್ತದೆ. ನಂತರ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಸಿದ್ದಪಡಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆಗೆ ಕರೆದು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23-10-2026

ಇತರೆ ಪ್ರಮುಖ ಲಿಂಕುಗಳು:

ಅಧಿಕೃತ ವೆಬ್ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ರಾಜ್ಯದ ವಿವಿಧ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಸ್ತುತ ಲೇಖನದಲ್ಲಿ ನೀಡಲಾದ ಎಲ್ಲ ವಿವರಗಳನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಂಡು ನಿಗದಿತ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.

Related Stories

Leave a Reply

Your email address will not be published. Required fields are marked *